ADVERTISEMENT

ಕೋವಿಡ್‌ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

ಏಜೆನ್ಸೀಸ್
Published 19 ಏಪ್ರಿಲ್ 2023, 3:30 IST
Last Updated 19 ಏಪ್ರಿಲ್ 2023, 3:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್‌ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.

‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್‌ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.

ADVERTISEMENT

‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.

‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.