ADVERTISEMENT

ಅಧಿಕಾರ ಸ್ವೀಕಾರ ಪ್ರಕ್ರಿಯೆ ಮುಗಿದ ಕೂಡಲೇ ವಲಸೆ ಮಸೂದೆ ಜಾರಿ: ಜೋ ಬೈಡನ್

ಅಮೆರಿಕದ ಚುನಾಯಿತ ಅಧ್ಯಕ್ಷ ಭರವಸೆ

ಪಿಟಿಐ
Published 9 ಜನವರಿ 2021, 8:00 IST
Last Updated 9 ಜನವರಿ 2021, 8:00 IST
ಜೋ ಬೈಡನ್
ಜೋ ಬೈಡನ್   

ವಾಷಿಂಗ್ಟನ್‌: ಅಧ್ಯಕ್ಷರ ಅಧಿಕಾರ ಸ್ವೀಕಾರ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ‘ವಲಸೆ ಮಸೂದೆ‘ಯನ್ನು ಜಾರಿಗೊಳಿಸಲಾಗುತ್ತದೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

‘ಅಧಿಕಾರ ಸ್ವೀಕಾರದ ನಂತರ ನಿಮ್ಮ ಆಡಳಿತದ ಮೊದಲ ಕಾರ್ಯವೇನು‘ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೈಡನ್‌, ‘ಅಧಿಕಾರ ಹಸ್ತಾಂತರ ಪೂರ್ಣಗೊಳ್ಳುತ್ತಿದ್ದಂತೆ ವಲಸೆ ಮಸೂದೆಯನ್ನು ಪರಿಚಯಿಸುವ ಜತೆಗೆ, ಈ ಕುರಿತು ಪ್ರಕ್ರಿಯೆ ಆರಂಭಿಸುವಂತೆ ಸೂಕ್ತ ಸಮಿತಿಗಳಿಗೆ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ.

ಜನವರಿ 20ರಂದು ಅಮೆರಿಕ ಅಧ್ಯಕ್ಷರಾಗಿ ಬೈಡನ್ ಅಧಿಕಾರ ಸ್ವೀಕರಿಸಲಿದ್ದು, ಇದಾದ ನಂತರ ಟ್ರಂಪ್ ಆಡಳಿತದಲ್ಲಿರುವ ಹಲವು ನೀತಿಗಳನ್ನು ಬದಲಿಸುವ ಸುಳಿವು ನೀಡಿದ್ದಾರೆ.

ADVERTISEMENT

ಚುನಾವಣಾ ಪ್ರಚಾರದ ರ‍್ಯಾಲಿಗಳಲ್ಲೂ ಈ ವಲಸೆ ಮಸೂದೆ ಬಗ್ಗೆ ಪ್ರಸ್ತಾಪಿಸಿದ್ದ ಬೈಡನ್ ಅವರು, ಟ್ರಂಪ್ ಆಡಳಿತದ ‘ಕ್ರೂರ‘ ವಲಸೆ ನೀತಿಗಳನ್ನು ಹಿಮ್ಮೆಟ್ಟಿಸುವುದಾಗಿ ಭರವಸೆ ನೀಡಿದ್ದರು. ಜತೆಗೆ, ಅಧಿಕಾರಕ್ಕೆ ಬಂದ ನೂರು ದಿನಗಳೊಳಗೆ ‘ವಲಸೆ ಮಸೂದೆ’ಯನ್ನು ಜಾರಿಗೊಳಿಸುವುದಾಗಿಯೂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.