ಕಾಬೂಲ್: ಅಫ್ಗಾನಿಸ್ತಾನದ ಜಲಾಲಾಬಾದ್‌ನಲ್ಲಿ ಭಾನುವಾರ ಮತ್ತೊಂದು ಭೀಕರ ಸ್ಫೋಟ ನಡೆದಿದೆ. ಘಟನೆಯಲ್ಲಿ ಇಬ್ಬರು ನಾಗರಿಕರು, ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ತಾಲಿಬಾನಿಗಳಿಗೆ ಸೇರಿದ, ಗಡಿ ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ಈ ಸ್ಫೋಟ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಪ್ರಾಬಲ್ಯ ಇರುವ ಇಲ್ಲಿ ಶನಿವಾರವೂ ಮೂರು ಕಡೆ ಬಾಂಬ್ ಸ್ಫೋಟಿಸಲಾಗಿತ್ತು.ತಾಲಿಬಾನ್ ಹಾಗೂ ಇಸ್ಲಾಮಿಕ್ ಸ್ಟೇಟ್ ಉಗ್ರರ ನಡುವೆ ವೈರತ್ವವಿದೆ. ಅಫ್ಗಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಳ್ಳುವ ಮುಂಚೆಯೂ ಅವರು ಪರಸ್ಪರ ಕಾದಾಟ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.