ADVERTISEMENT

World covid-19 update: 65 ಲಕ್ಷ ದಾಟಿದ ಜಾಗತಿಕ ಸೋಂಕಿತರ ಸಂಖ್ಯೆ

ಏಜೆನ್ಸೀಸ್
Published 4 ಜೂನ್ 2020, 8:21 IST
Last Updated 4 ಜೂನ್ 2020, 8:21 IST
   

ನ್ಯೂಯಾರ್ಕ್: ಜಗತ್ತಿನಾದ್ಯಂತ 65,13,301ಜನರಿಗೆ ಕೋವಿಡ್–19 ಸೋಂಕು ತಗುಲಿದೆ. ಇದರಲ್ಲಿ, 28,08,917ಮಂದಿ ಗುಣಮುಖರಾಗಿದ್ದಾರೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 3,86,091 ಸೋಂಕಿತರು ಮೃತಪಟ್ಟಿದ್ದಾರೆ.

ಅತಿ ಹೆಚ್ಚು(18,51,520) ಸೋಂಕು ಕಾಣಿಸಿಕೊಂಡಿರುವ ಅಮೆರಿಕದಲ್ಲಿ, ಇದುವರೆಗೆ ಒಟ್ಟು 1,07,175ಜನರು ಮೃತಪಟ್ಟಿದ್ದಾರೆ.ಈ ದೇಶದ ನ್ಯೂಯಾರ್ಕ್ ಒಂದರಲ್ಲೇ 30,019 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಅಮೆರಿಕದ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 5,84,016ಕ್ಕೆ ಏರಿಕೆಯಾಗಿದೆ. ರಷ್ಯಾದಲ್ಲಿ 4,84,016 ಲಕ್ಷ ಮೀರಿದೆ. ಈ ದೇಶಗಳಲ್ಲಿ ಕ್ರಮವಾಗಿ32,548 ಮತ್ತು5,208ಜನರು ಮೃತಪಟ್ಟಿದ್ದಾರೆ.

ಇಂಗ್ಲೆಂಡ್‌ನಲ್ಲಿ2,81,270 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 39,811ಸೋಂಕಿತರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.