ADVERTISEMENT

Covid-19 World Update | 1.36 ಕೋಟಿ ಸೋಂಕಿತರು, 5.8 ಲಕ್ಷ ಮಂದಿ ಸಾವು

ಏಜೆನ್ಸೀಸ್
Published 16 ಜುಲೈ 2020, 1:40 IST
Last Updated 16 ಜುಲೈ 2020, 1:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್: ವರ್ಲ್ಡೋಮೀಟರ್ ವೆಬ್‍ಸೈಟ್‌ನ ಅಂಕಿ ಅಂಶಗಳ ಪ್ರಕಾರ ವಿಶ್ವದಾದ್ಯಂತ 136,89,917ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 5,86,774ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ 80,36,499ಸೋಂಕಿತರು ಗುಣಮುಖರಾಗಿದ್ದಾರೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 3,616,747ಸೋಂಕಿತರಿದ್ದು, ಇದುವರೆಗೆ 1,40,140ಮಂದಿ ಮೃತಪಟ್ಟಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 19,70,909 ಮಂದಿಗೆ ಸೋಂಕು ತಗುಲಿದ್ದು, 75,523 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 9,70,169 ಮಂದಿಗೆ ಸೋಂಕು ದೃಢಪಟ್ಟಿದ್ದು, ಇವರೆಗೆ 24,929 ಮಂದಿ ಮೃತರಾಗಿದ್ದಾರೆ. ಇತ್ತರಷ್ಯಾದಲ್ಲಿ 746,369 ಮಂದಿಗೆ ಸೋಂಕು ತಗುಲಿದ್ದು, 11,770 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.