
ಪ್ರಜಾವಾಣಿ ವಾರ್ತೆ
ಢಾಕಾ/ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಅವರನ್ನು ಗಡೀಪಾರು ಮಾಡುವಂತೆ ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಕೊಂಡಿದ್ದರು ಎಂದು ಬಾಂಗ್ಲಾದೇಶದ ವಿದೇಶಾಂಗ ಸಲಹೆಗಾರ ಮೊಹಮ್ಮದ್ ತೌಹಿದ್ ಹೊಸೇನ್ ತಿಳಿಸಿದ್ದಾರೆ.
‘ಮಾತುಕತೆ ನಡೆದಿರುವುದು ನಿಜ. ಯಾವುದೂ ಇನ್ನೂ ಅಂತಿಮವಾಗಿಲ್ಲ. ಮಾತುಕತೆಯನ್ನು ಇನ್ನಷ್ಟು ಮುಂದುವರಿಸಬೇಕಿದೆ’ ಎಂದಷ್ಟೇ ಅವರು ಮಂಗಳವಾರ ಸುದ್ದಿಗಾರರಿಗೆ ಹೇಳಿದ್ದಾರೆ.
ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಧಕ್ಕೆ ತರುವ ರೀತಿಯ ಹೇಳಿಕೆಗಳನ್ನು ಯಾವ ಪಕ್ಷದವರೂ ನೀಡಕೂಡದು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.