ಕೀವ್: ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಯತ್ನ ನಡೆದ ನಂತರದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಾಜಕೀಯ ಹಿಂಸಾಚಾರವನ್ನು ಖಂಡಿಸಿದ್ದಾರೆ.
‘ಹತ್ಯೆ ಯತ್ನ ಪ್ರಕರಣದ ಶಂಕಿತ ವ್ಯಕ್ತಿಯನ್ನು ಬೇಗನೆ ಬಂಧಿಸಿರುವುದು ಒಳ್ಳೆಯ ವಿಚಾರ’ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಶಂಕಿತ ರೂತ್‌ನಿಂದ ಉಕ್ರೇನ್ ಅಧಿಕಾರಿಗಳು ಅಂತರ ಕಾಯ್ದುಕೊಂಡಿದ್ದಾರೆ. ‘ಅವರು ಉಕ್ರೇನ್‌ನಲ್ಲಿ ಯಾವುದೇ ಕರ್ತವ್ಯ ನಿರ್ವಹಿಸಿಲ್ಲ. ಅಲ್ಲದೆ, ಇಲ್ಲಿ ಸರ್ಕಾರಿ ವ್ಯವಸ್ಥೆಯ ಜೊತೆ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.