ವೊಲೊಡಿಮಿರ್
ಪಿಟಿಐ ಚಿತ್ರ
ನ್ಯೂಯಾರ್ಕ್/ವಾಷಿಂಗ್ಟನ್: ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳುವ ದೇಶಗಳ ಮೇಲೆ ಸುಂಕ ಹೇರುವುದು ಸರಿಯಾದ ನಿರ್ಧಾರ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿಕೆ ನೀಡಿದ್ದಾರೆ. ಭಾರತ ಹೆಸರು ಉಲ್ಲೇಖಿಸದೇ ಅವರು ಈ ಹೇಳಿಕೆ ನೀಡಿದ್ದಾರೆ.
‘ರಷ್ಯಾದ ಜೊತೆ ಒಪ್ಪಂದ ಮಾಡಿಕೊಳ್ಳುವ ದೇಶಗಳಿಗೆ ಸುಂಕ ವಿಧಿಸುವುದು ಸರಿಯಾದ ನಿರ್ಧಾರವಾಗಿದೆ’ ಎಂದು ಎಬಿಸಿ ಸುದ್ದಿವಾಹಿನಿಯ ‘ದಿಸ್ ವೀಕ್’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
‘ಶಾಂಘೈ ಸಹಕಾರ ಸಂಘಟನೆಯ’ (ಎಸ್‌ಸಿಒ) ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗುವ ಮೂಲಕ ಸುಂಕ ಹೇರಿಕೆ ಹಿನ್ನಡೆಯಾಗಿಲ್ಲವೇ ಎಂಬ ಪ್ರಶ್ನೆಗೆ ಉತ್ತರ ನೀಡಲು ಝೆಲೆನ್‌ಸ್ಕಿ ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.