ವೊಲೊಡಿಮಿರ್ ಝೆಲೆನ್‌ಸ್ಕಿ, ಡೊನಾಲ್ಡ್ ಟ್ರಂಪ್
(ರಾಯಿಟರ್ಸ್ ಚಿತ್ರ)
ಕೀವ್: ನ್ಯಾಟೊ ಮೂಲಕ ಉಕ್ರೇನ್‌ಗೆ ಹೆಚ್ಚಿನ ಶಸ್ತ್ರಾಸ್ತ್ರ ಪೂರೈಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸಿರುವುದಕ್ಕೆ ಉಕ್ರೇನ್ ಅಧ್ಯಕ್ಷ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಸಂತಸ ವ್ಯಕ್ತಪಡಿಸಿದ್ದಾರೆ.
‘ನಮ್ಮ ಜನರ ಜೀವ ರಕ್ಷಿಸಲು ಬೆಂಬಲ ನೀಡಿರುವ ಟ್ರಂಪ್ ಅವರಿಗೆ ಕೃತಜ್ಞನಾಗಿದ್ದೇನೆ’ ಎಂದು ಝೆಲೆನ್‌ಸ್ಕಿ ಅವರು ಸೋಮವಾರ ರಾತ್ರಿ ತಿಳಿಸಿದ್ದಾರೆ.
ನ್ಯಾಟೊ ಮಿತ್ರರಾಷ್ಟ್ರಗಳ ಮೂಲಕ ಉಕ್ರೇನ್‌ನ ‘ಪೇಟ್ರಿಯಟ್’ ವಾಯು ರಕ್ಷಣಾ ವ್ಯವಸ್ಥೆ ಹಾಗೂ ಹೆಚ್ಚಿನ ಕ್ಷಿಪಣಿಗಳನ್ನು ಪೂರೈಸುವುದಾಗಿ ಟ್ರಂಪ್ ಅವರು ಸೋಮವಾರ ಹೇಳಿದ್ದರು.
ಉಕ್ರೇನ್ ಜತೆಗಿನ ಯುದ್ಧವನ್ನು ಕೊನೆಗೊಳಿಸಲು 50 ದಿನಗಳಲ್ಲಿ ಒಪ್ಪಂದ ಮಾಡಿಕೊಳ್ಳದಿದ್ದರೆ ರಷ್ಯಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 100ರಷ್ಟು ಸುಂಕ ವಿಧಿಸುವುದಾಗಿಯೂ ಎಚ್ಚರಿಸಿದ್ದರು. ನ್ಯಾಟೊ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಜತೆ ನಡೆದ ಮಾತುಕತೆ ಬಳಿಕ ಅವರು ಈ ಘೋಷಣೆ ಮಾಡಿದ್ದರು.
ಟ್ರಂಪ್ ಎಚ್ಚರಿಕೆ ಕಡೆಗಣಿಸುತ್ತೇವೆ (ಮಾಸ್ಕೊ ವರದಿ): ಅಮೆರಿಕದ ಅಧ್ಯಕ್ಷರು ನೀಡಿರುವ ಎಚ್ಚರಿಕೆಯನ್ನು ‘ಕಡೆಗಣಿಸುತ್ತೇವೆ’ ಎಂದು ರಷ್ಯಾದ ಮಾಜಿ ಅಧ್ಯಕ್ಷ ದಿಮಿತ್ರಿ ಮೆಡ್ವೆಡೆವ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.