
ವೊಲೊಡಿಮಿರ್ ಝೆಲೆನ್‌ಸ್ಕಿ
ಕೀವ್: ‘ಉಕ್ರೇನ್–ರಷ್ಯಾ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಶಾಂತಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧಿಕಾರಿಗಳ ಜತೆಗೆ ನಡೆಯುತ್ತಿರುವ ಮಾತುಕತೆ ಇನ್ನೇನು ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ. ಶಾಂತಿ ಒಪ್ಪಂದದ ಪ್ರಸ್ತಾವವನ್ನು ಶೀಘ್ರವೇ ರಷ್ಯಾದ ಎದುರು ಪ್ರಸ್ತುತಪಡಿಸಲಾಗುವುದು’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.
ಬರ್ಲಿನ್‌ನಲ್ಲಿ ಅಮೆರಿಕದ ಅಧಿಕಾರಿಗಳು ಹಾಗೂ ಐರೋಪ್ಯ ನಾಯಕರ ಜತೆಗೆ ಸೋಮವಾರ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಝೆಲೆನ್‌ಸ್ಕಿ ಮಾತನಾಡಿದರು.
‘ಶಾಂತಿ ಒಪ್ಪಂದದ ಕರಡು ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇದು ಫಲಪ್ರದವೂ ಆಗಿದೆ. ರಷ್ಯಾ ಆಕ್ರಮಿತ ಉಕ್ರೇನ್ ಪ್ರದೇಶಗಳ ಸ್ಥಿತಿ ಕುರಿತ ವಿಚಾರ ಇನ್ನೂ ಬಗೆಹರಿದಿಲ್ಲ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ’ ಎಂದಿದ್ದಾರೆ.
ಅಲ್ಲದೇ, ಶೀಘ್ರವೇ ಪ್ರಸ್ತಾವದ ವಿಚಾರಗಳು ಅಂತಿಮಗೊಳ್ಳಲಿದೆ. ನಂತರದಲ್ಲಿ ಅಮೆರಿಕದ ರಾಯಭಾರಿಗಳು ಪ್ರಸ್ತಾವವನ್ನು ರಷ್ಯಾದ ಎದುರು ಪ್ರಸ್ತುತಪಡಿಸಲಿದ್ದಾರೆ. ಅಮೆರಿಕದಲ್ಲಿ ಮುಂದಿನ ವಾರಂತ್ಯದಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಪ್ರಸ್ತಾವ ಅಂತಿಮಗೊಳ್ಳುವ ಸಾಧ್ಯತೆಗಳಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.