ADVERTISEMENT

ನ್ಯೂಯಾರ್ಕ್ ಮೇಯರ್ ಪ್ರಾಥಮಿಕ ಚುನಾವಣೆ: ಜೊಹ್ರಾನ್‌ಗೆ ಗೆಲುವು

ಏಜೆನ್ಸೀಸ್
Published 26 ಜೂನ್ 2025, 3:59 IST
Last Updated 26 ಜೂನ್ 2025, 3:59 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

ನ್ಯೂಯಾರ್ಕ್: ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಸ್ಥಾನಕ್ಕಾಗಿ ನಡೆದ ಪ್ರಾಥಮಿಕ ಚುನಾವಣೆಯಲ್ಲಿ ಇಂಡೋ–ಅಮೆರಿಕನ್ ಅಭ್ಯರ್ಥಿ ಜೊಹ್ರಾನ್ ಮಮ್ದಾನಿ ಅವರು ಮಾಜಿ ಗವರ್ನರ್ ಆ್ಯಂಡ್ರ್ಯೂ ಕೌಮೋ ಅವರನ್ನು ಮಣಿಸಿದ್ದಾರೆ. ಜುಲೈ 1ರಂದು ಅಧಿಕೃತ ಫಲಿತಾಂಶ ಹೊರಬೀಳಲಿದೆ. 

ಕ್ವೀನ್ಸ್‌ನ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಮತ್ತು ಸ್ಟೇಟ್‌ ಅಸೆಂಬ್ಲಿ ಸದಸ್ಯರಾಗಿರುವ ಜೊಹ್ರಾನ್ ಅವರು ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕರಾದ ಮೀರಾ ನಾಯರ್ ಮತ್ತು ಮಹಮೂದ್ ಮಮ್ದಾನಿ ಅವರ ಪುತ್ರ.

ADVERTISEMENT

ಮೇಯರ್‌ ಅಂತಿಮ ಆಯ್ಕೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಜೊಹ್ರಾನ್ ಅವರು ಮಾಜಿ ಮೇಯರ್, ರೆಪಬ್ಲಿಕನ್ ಪಕ್ಷದ ಎರಿಕ್ ಆ್ಯಡಮ್ಸ್ ಅವರನ್ನು ಎದುರಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.