ಲಂಡನ್: ಕೆನ್ನಿಂಗ್ಟನ್ನ ಓವಲ್ ಅಂಗಳದಲ್ಲಿ ಇಂದು ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 25.2 ಓವರ್ಗಳಲ್ಲಿ 110 ರನ್ಗಳಿಗೆ ಆಲೌಟ್ ಆಯಿತು.
ಇದು ಏಕದಿನ ಕ್ರಿಕೆಟ್ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗಳಿಸಿದ ಅತ್ಯಂತ ಕಡಿಮೆ ಮೊತ್ತವಾಗಿದೆ. ಈ ಪಂದ್ಯದಲ್ಲಿ ನಾಲ್ವರು ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ಶೂನ್ಯಕ್ಕೆ ಔಟಾದರು.
ಅಕ್ಟೋಬರ್ 15, 2006 ರಂದು ಜೈಪುರದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 125ಕ್ಕೆ ಆಲೌಟ್ ಆಗಿತ್ತು. ಇದು ಈ ಹಿಂದಿನ ಕಳಪೆ ಸಾಧನೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.