ADVERTISEMENT

ಬುಧವಾರ 23-3-1961

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 19:30 IST
Last Updated 22 ಮಾರ್ಚ್ 2011, 19:30 IST


ಇನ್ನೂ ಕೆಲವು ಭಾಗಗಳಲ್ಲಿ ಪಾನ ನಿರೋಧ ಜಾರಿಗೆ
ಬೆಂಗಳೂರು, ಮಾ. 22 - 1961-62ನೇ ಸಾಲಿನಲ್ಲಿ ರಾಜ್ಯದ ಇನ್ನೂ ಕೆಲವು ಭಾಗಗಳಲ್ಲಿ ಪಾನ ನಿರೋಧ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರವು ನಿರ್ಧರಿಸಿದೆ. ಆದರೆ ಯಾವ ಭಾಗಗಳೆಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಇಂದು ವಿಧಾನ ಸಭೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವಾಗಿ ಮುಖ್ಯಮಂತ್ರಿ ಶ್ರೀ ಬಿ. ಡಿ. ಜತ್ತಿ ಮತ್ತು ಅಬ್ಕಾರಿ ಸಚಿವ ಶ್ರೀ ವೀರೇಂದ್ರ ಪಾಟೀಲ್ ಈ ವಿಚಾರ ತಿಳಿಸಿದರು.

ಆಕಾಶವಾಣಿ ಕಾಂಗ್ರೆಸ್ ಪಕ್ಷದ ಮುಖವಾಣಿ
ನವದೆಹಲಿ, ಮಾ. 22 - ಇಂದು ಮಧ್ಯಾಹ್ನ ಲೋಕ ಸಭೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಶಾಖೆಯ ಗ್ರಾಂಟ್ಸ್ ಬೇಡಿಕೆ ಚರ್ಚೆಗೆ ಬಂದಾಗ, ಆಲ್ ಇಂಡಿಯಾ ರೇಡಿಯೋವು ರಾಷ್ಟ್ರದ ವಿವಿಧ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ವರದಿ ಮಾಡುವಾಗ ನಿಷ್ಪಕ್ಷಪಾತ ಧೋರಣೆಯನ್ನು ಅನುರಿಸಬೇಕೆಂದು ಅನೇಕ ವಿರೋಧ ಪಕ್ಷಗಳ ಸದಸ್ಯರು ಒತ್ತಾಯಿಸಿದರು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.