ADVERTISEMENT

ಶುಕ್ರವಾರ, 17-2-1962

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2012, 19:30 IST
Last Updated 16 ಫೆಬ್ರುವರಿ 2012, 19:30 IST

ಶೇ 50 ರಷ್ಟು ಮತದಾನ

ಮುಂಬೈ, ಫೆ. 16 -  ಭಾರತದ ತೃತೀಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನವು ಇಂದು ಪ್ರಥಮವಾಗಿ ಪಶ್ಚಿಮ ಬಂಗಾಳದಲ್ಲಿ ಆರಂಭವಾಯಿತು. ಸುಮಾರು ಶೇ 50 ರಷ್ಟು ಮತದಾರರು ಮತ ಚಲಾಯಿಸಿದರು. ಪಶ್ಚಿಮ ಬಂಗಾಳದ 44 ಅಸೆಂಬ್ಲಿ ಕ್ಷೇತ್ರಗಳಲ್ಲಿ ಹಾಗೂ 19 ಲೋಕ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ ಮತದಾನ ಆರಂಭವಾಯಿತು.

ಮೆಟ್ರಿಕ್ ಆದ ಎಲ್ಲ ಗಿರಿಜನ ವಿದ್ಯಾರ್ಥಿಗಳಿಗೆ ಸ್ಕಾಲರ್ ಷಿಪ್
ಮದರಾಸು, ಫೆ. 16 - ಗಿರಿಜನ ವಿದ್ಯಾರ್ಥಿಗಳಿಗೆ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಅರ್ಹತೆ ಅಥವ ಆದಾಯವನ್ನು ಪರಿಗಣನೆಗೆ ತೆಗೆದುಕೊಳ್ಳದೆ (ಈವರೆಗಿನ ವಾರ್ಷಿಕ ಪರೀಕ್ಷೆಗಳಲ್ಲಿ ತೇರ್ಗಡೆಯಾದಲ್ಲಿ) ವಿದ್ಯಾರ್ಥಿ ವೇತನಗಳನ್ನು ತೃತೀಯ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ ಕೊಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.