ADVERTISEMENT

25 ವರ್ಷಗಳ ಹಿಂದೆ | ಶುಕ್ರವಾರ, 9–6–1995

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 19:15 IST
Last Updated 8 ಜೂನ್ 2020, 19:15 IST

ಸಣ್ಣ, ಮಧ್ಯಮ ವರ್ಗದ ರೈತರಿಗೆ ರಸಗೊಬ್ಬರ ಸಬ್ಸಿಡಿ– ಕೇಂದ್ರ ಒಪ್ಪಿಗೆ
ಬೆಂಗಳೂರು, ಜೂನ್‌ 8–
ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಅನುಕೂಲವಾಗುವಂತೆ ರಸಗೊಬ್ಬರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸಹಾಯಧನ ನೀಡಲು ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡರು ಇಂದು ಇಲ್ಲಿ ತಿಳಿಸಿದರು.

‘ರೈತ ಸಮುದಾಯ ಪಡುತ್ತಿರುವ ಬವಣೆ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿದ್ದೇನೆ. ಅವರ ಅಪೇಕ್ಷೆಯಂತೆ ಒಂದು ತಿಂಗಳಲ್ಲಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ನಿಖರವಾಗಿ ಎಷ್ಟಿದ್ದಾರೆ ಎಂಬುದನ್ನು ಅರಿಯಲು ಸಮೀಕ್ಷೆ ನಡೆಸಿ ಅಂಕಿ ಅಂಶಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು’ ಎಂದು ಅವರು ತಿಳಿಸಿದರು.

**

ADVERTISEMENT

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಎಚ್ಚೆನ್‌, ಸಾಹಿತ್ಯ ಅಕಾಡೆಮಿಗೆ ಶಾಂತರಸ ಅಧ್ಯಕ್ಷ
ಬೆಂಗಳೂರು, ಜೂನ್‌ 8–
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಖ್ಯಾತ ಶಿಕ್ಷಣ ತಜ್ಞ ಡಾ. ಎಚ್‌.ನರಸಿಂಹಯ್ಯ ಅವರನ್ನು ನೇಮಕ ಮಾಡಲಾಗಿದೆ.

ಸಾಹಿತ್ಯ ಅಕಾಡೆಮಿಗೆ ಕವಿ, ಕತೆಗಾರ ಶಾಂತರಸ, ನಾಟಕ ಅಕಾಡೆಮಿಗೆಡಾ. ಕೆ.ಮರುಳಸಿದ್ಧಪ್ಪ, ಜಾನಪದ ಮತ್ತು ಯಕ್ಷಗಾನ ಅಕಾಡೆಮಿಗೆಡಾ. ಎಚ್‌.ಜೆ.ಲಕ್ಕಪ್ಪಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನೃತ್ಯ ಮತ್ತು ಸಂಗೀತ ಅಕಾಡೆಮಿಯ ಅಧ್ಯಕ್ಷರಾಗಿ ಖ್ಯಾತ ನೃತ್ಯ ಕಲಾವಿದೆ ಚಂದ್ರಭಾಗಾದೇವಿ ನೇಮಕವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.