ADVERTISEMENT

25 ವರ್ಷಗಳ ಹಿಂದೆ | ಬುಧವಾರ, 19-7-1995

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 1:27 IST
Last Updated 19 ಜುಲೈ 2020, 1:27 IST

ಆಡಳಿತ ವ್ಯವಸ್ಥೆಯ ಶೀಘ್ರ ಮಾರ್ಪಾಡು: ಗೌಡರ ಘೋಷಣೆ

ಕಲಬುರ್ಗಿ, ಜುಲೈ 18: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೆಲವು ದೋಷಗಳಿದ್ದು, ಅವುಗಳನ್ನು ನಿವಾರಿಸಿ ಸುಧಾರಣೆ ತರಲು ಸರ್ಕಾರದ ಕಾರ್ಯವೈಖರಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ಇಂದು ಇಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿರುವ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದಾಕ್ಷಣ ಈಗ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಅರ್ಥವಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.