ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ: ಶುಕ್ರವಾರ, 13-10-1995

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 19:31 IST
Last Updated 12 ಅಕ್ಟೋಬರ್ 2020, 19:31 IST
   

ಗಿಲ್ ವಿರುದ್ಧ ಮೊಕದ್ದಮೆಗೆ ಕೋರ್ಟ್ ಆದೇಶ

ನವದೆಹಲಿ, ಅ. 12 (ಯುಎನ್‌ಐ)– ಚಂಡೀಗಡದಲ್ಲಿ 1988ರಲ್ಲಿ ಮಹಿಳಾ ಐಎಎಸ್‌ ಅಧಿಕಾರಿಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕಾಗಿ ಪಂಜಾಬ್ ಪೊಲೀಸ್ ಮುಖ್ಯಸ್ಥ ಕೆ.ಪಿ.ಎಸ್. ಗಿಲ್ ಅವರ ಮೇಲೆ ಮೊಕದ್ದಮೆ ಹೂಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.

ರಾಜ್ಯದ ಐಎಎಸ್ ಅಧಿಕಾರಿ ರೂಪನ್ ದೇವಲ್ ಬಜಾಜ್ ಹಾಗೂ ಆಕೆಯ ಪತಿ ಬಿ.ಆರ್.ಬಜಾಜ್ ನೀಡಿದ್ದ ದೂರಿನ ಅನ್ವಯ ಪೊಲೀಸರು ನೀಡಿದ ಪ್ರಾಥಮಿಕ ತನಿಖಾ ವರದಿ ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಎ.ಎಸ್.ಆನಂದ್ ಹಾಗೂ ಎಂ.ಕೆ.ಮುಖರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠ ಚಂಡೀಗಡದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಗೆ ಈ ಆದೇಶ ನೀಡಿತು.

ADVERTISEMENT

ವಾಸುದೇವನ್ ಬಿಡುಗಡೆ

ಬೆಂಗಳೂರು, ಅ. 12– ನ್ಯಾಯಾಲಯ ನಿಂದನೆಗಾಗಿ ಒಂದು ತಿಂಗಳ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಐಎಎಸ್ ಅಧಿಕಾರಿ, ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ವಾಸುದೇವನ್ ಬೆಂಗಳೂರು ಕೇಂದ್ರ ಕಾರಾಗೃಹದಿಂದ ಇಂದು ಬಿಡುಗಡೆಯಾದರು.

ಮಧ್ಯಾಹ್ನ 3.30ರ ಸಮಯದಲ್ಲಿ ಜೈಲಿನಿಂದ ಹೊರಬಂದ ವಾಸುದೇವನ್ ಅವರನ್ನು ಸಿಬ್ಬಂದಿಯೊಬ್ಬರು ಖಾಸಗಿ ಕಾರಿನಲ್ಲಿ ಮನೆಗೆ ಕರೆದೊಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.