ADVERTISEMENT

ಗುರುವಾರ, 21–4–1994

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 18:42 IST
Last Updated 20 ಏಪ್ರಿಲ್ 2019, 18:42 IST

ಫ್ರೆಂಚ್ ಸಹಯೋಗ: ರಾಜ್ಯಕ್ಕೆ ಎರಡು ಹೊಸ ಡೀಸೆಲ್ ವಿದ್ಯುತ್ ಘಟಕ
ಬೆಂಗಳೂರು, ಏ. 20– ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಿದ್ಯುತ್ ಕೊರತೆಯನ್ನು ನೀಗಿಸಲು ತುರ್ತು ಕ್ರಮವಾಗಿ ಫ್ರೆಂಚ್ ಕಂಪನಿಯೊಂದರ ಸಹಯೋಗದೊಂದಿಗೆ 600 ಕೋಟಿ ರೂಪಾಯಿ ಮೊತ್ತದಲ್ಲಿ 230 ಮೆಗಾವಾಟ್ ಸಾಮರ್ಥ್ಯದ ಡೀಸೆಲ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಉದ್ದೇಶಿತ ಈ ವಿದ್ಯುತ್ ಉತ್ಪಾದನಾ ಘಟಕಗಳು ಮಂಡ್ಯದ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ತಲೆಯೆತ್ತಲಿದೆ ಎಂದು ವಿದ್ಯುತ್ ಖಾತೆಯ ಹೊಣೆಯನ್ನೂ ಹೊತ್ತಿರುವ ಉಪ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು.

ಬೀಜಕ್ಕೆ ನೂಕು ನುಗ್ಗಲು: ರೈತರ ಮೇಲೆ ಗುಂಡು
ಮೈಸೂರು, ಏ. 20–ಹತ್ತಿಬೀಜ ಪಡೆಯಲು ಭಾರೀ ಸಂಖ್ಯೆಯಲ್ಲಿ ಸೇರಿದ್ದ ರೈತರು ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ಒಬ್ಬ ವ್ಯಕ್ತಿ ಗಾಯಗೊಂಡ ಘಟನೆ ಹೆಗ್ಗಡದೇವನಕೋಟೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.