ತ್ರಿಪುರಾ ಜನಾಂಗೀಯ ಘರ್ಷಣೆ: 45 ಸಾವು
ಅಗರ್ತಲ, ಮೇ 21 (ಪಿಟಿಐ): ನಿಷೇಧಿತ ತ್ರಿಪುರಾ ರಾಷ್ಟ್ರೀಯ ವಿಮೋಚನ ರಂಗ (ಎನ್‌ಎಲ್‌ಎಫ್‌ಟಿ) ಇಂದು ಇನ್ನೂ 7 ಮಂದಿಯನ್ನು ಗುಂಡಿಟ್ಟು ಸಾಯಿಸಿದ್ದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸತ್ತವರ ಸಂಖ್ಯೆ 45ಕ್ಕೆ ಏರಿದೆ.
ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ರತಿಯಾದಲ್ಲಿ ಎನ್‌ಎಲ್‌ಎಫ್‌ಟಿ ಉಗ್ರಗಾಮಿಗಳು 7 ಮಂದಿಯನ್ನು ಗುಂಡಿಟ್ಟು ಸಾಯಿಸಿದರು. ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿನ್ನೆ 25 ಮಂದಿಯನ್ನು ಉಗ್ರರು ಹತ್ಯೆ ಮಾಡಿದ್ದರು. ಶಾಲೆಯೊಂದರಲ್ಲಿ ರಕ್ಷಣೆ ಪಡೆದಿದ್ದವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಯಿತು.
***
‘ಪಂಚಾಯಿತಿ ಚುನಾವಣೆ ಗೆಲುವು ಉಸ್ತುವಾರಿ ಸಚಿವರ ಜವಾಬ್ದಾರಿ’
ಬೆಂಗಳೂರು, ಮೇ 21: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡುವುದು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಇಲ್ಲಿ ಸ್ಪಷ್ಟಪಡಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಂದರ್ಥದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದಂತೆ ಮಾತನಾಡಿದರು. ಚುನಾವಣೆಯಲ್ಲಿ ಏನಾದರೂ ಹೆಚ್ಚು–ಕಡಿಮೆಯಾದರೆ ತಾವು ಹೊಣೆಯಲ್ಲ ಎಂದೂ ಹೇಳಿಬಿಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.