ADVERTISEMENT

25 ವರ್ಷಗಳ ಹಿಂದೆ: ಸಾವಿರ ಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 23:21 IST
Last Updated 5 ನವೆಂಬರ್ 2025, 23:21 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಸಾವಿರ ಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ: ಮುಂದಿನ ತಿಂಗಳಲ್ಲಿ ಜಾರಿ

ಬೆಂಗಳೂರು, ನ. 5– ರಾಜ್ಯದ ಒಂದು ಸಾವಿರ ಸರ್ಕಾರಿ ಪ‍್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಶಿಕ್ಷಣ ನೀಡುವ ಸರ್ಕಾರದ ಯೋಜನೆ ಅನುಷ್ಠಾನ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಆರಂಭಗೊಳ್ಳುವ ಸಾಧ್ಯತೆಯಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಇ.ವಿ. ರಮಣರೆಡ್ಡಿ ಇಂದು ಇಲ್ಲಿ ತಿಳಿಸಿದರು.

ಐಟಿ ಡಾಟ್‌ ಕಾಮ್‌ ಪ್ರದರ್ಶನದ ಅಂಗವಾಗಿ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ, ‘ವಿದ್ಯಾರ್ಥಿಗಳ ಅಂತರ್ಜಾಲ ಲೋಕ’ದ ಕೊನೆ ದಿನವಾದ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.