ADVERTISEMENT

25 ವರ್ಷಗಳ ಹಿಂದೆ: ಗಂಗಾವತಿ: ರೈತರ ಮೇಲೆ ಲಾಠಿ, ಗಾಳಿಯಲ್ಲಿ ಗುಂಡು

ಪ್ರಜಾವಾಣಿ ವಿಶೇಷ
Published 6 ನವೆಂಬರ್ 2025, 23:05 IST
Last Updated 6 ನವೆಂಬರ್ 2025, 23:05 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಗಂಗಾವತಿ: ರೈತರ ಮೇಲೆ ಲಾಠಿ, ಗಾಳಿಯಲ್ಲಿ ಗುಂಡು

ಗಂಗಾವತಿ, ನ. 6– ಭತ್ತದ ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡಿ ಸರ್ಕಾರವೇ ಖರೀದಿ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಲ್ಲದೆ ಗಾಳಿಯಲ್ಲಿ ಗುಂಡು ಹಾರಿಸಿದರು. ಪೊಲೀಸರು ಏಕಾಏಕಿ ಲಾಠಿ ಪ್ರಹಾರ ಆರಂಭಿಸಿದ್ದರಿಂದ ರೈತರು ದಿಕ್ಕೆಟ್ಟು ಓಡಲಾರಂಭಿಸಿದರು. ಈ ಗಲಭೆಯಿಂದಾಗಿ ನೂರಾರು ರೈತರು ಗಾಯಗೊಂಡಿದ್ದಾರೆ. ಅನಿರೀಕ್ಷಿತವಾಗಿ ನಡೆದ ಪೊಲೀಸರ ಹಲ್ಲೆಯಿಂದಾಗಿ ದಾರಿಯಲ್ಲಿ ಹೋಗುತ್ತಿದ್ದ ಅಮಾಯಕ ಜನರೂ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT