ADVERTISEMENT

25 ವರ್ಷಗಳ ಹಿಂದೆ: ಬುಧವಾರ 7–2–1996

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 19:31 IST
Last Updated 6 ಫೆಬ್ರುವರಿ 2021, 19:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೇಂದ್ರದಿಂದ ಜಲನೀತಿ ಹೇರಿಕೆ ಇಲ್ಲ–ಪ್ರಧಾನಿ

ನವದೆಹಲಿ, ಫೆ. 6: ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವು ಯಾವುದೇ ನೀತಿ ಅಥವಾ ಮಾರ್ಗದರ್ಶಿ ಸೂತ್ರವನ್ನು ರಾಜ್ಯಗಳ ಮೇಲೆ ಹೇರುವುದಿಲ್ಲ ಎಂದು ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರು ಇಂದು ಸ್ಪಷ್ಟಪಡಿಸಿದರು.

ನೀರಿನ ಬಳಕೆ ಮತ್ತು ನಿರ್ವಹಣೆಯಂಥ ಪ್ರಮುಖ ವಿಷಯದಲ್ಲಿ ಸಹಮತಕ್ಕೆ ಬರಲು ರಾಜ್ಯಗಳಿಗೆ ಮುಕ್ತ ಅವಕಾಶ ಇದೆ ಎಂದು ಇಲ್ಲಿ ನಡೆದ ಮೂರನೇ ರಾಷ್ಟ್ರೀಯ ಜಲಸಂಪನ್ಮೂಲ ಮಂಡಳಿ ಸಭೆಯಲ್ಲಿ ಪ್ರಧಾನಿಯವರು ತಿಳಿಸಿದರು.

ADVERTISEMENT

ಪ್ರತಿಯೊಂದು ರಾಜ್ಯಗಳು ತಮ್ಮದೇ ಆದ ಸಮಸ್ಯೆಗಳನ್ನು ಹೊಂದಿರುವುದರಿಂದ ಕೇಂದ್ರ ಸರ್ಕಾರವು ತನ್ನ ಅಭಿಪ್ರಾಯವನ್ನು ಹೇರುವ ಬದಲು ಈ ಮಂಡಲಿಯ ವೇದಿಕೆಯಲ್ಲಿಯೇ ಎಲ್ಲ ಮುಖ್ಯಮಂತ್ರಿಗಳು ಒಮ್ಮತಕ್ಕೆ ಬಂದು ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅವರು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.