ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ, 6.2.1996

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 19:30 IST
Last Updated 5 ಫೆಬ್ರುವರಿ 2021, 19:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಸ್ತೆತಡೆ ವಿರುದ್ಧ ಉಗ್ರ ಕ್ರಮ

ಬೆಂಗಳೂರು, ಫೆ. 5– ವ್ಯಕ್ತಿ ಎಷ್ಟೇ ದೊಡ್ಡವರಿರಲಿ, ನೆಲದ ಕಾನೂನಿಗೆ ಗೌರವ ತೋರಿಸದೆ ಸ್ವೇಚ್ಛಾಚಾರವಾಗಿ ನಡೆದುಕೊಳ್ಳುವವರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಪೂರ್ಣ ಅಧಿಕಾರ ನೀಡಲು ಸಚಿವ ಸಂಪುಟ ಇಂದು
ತೀರ್ಮಾನಿಸಿತು.

ನಗರದ ಬ್ರಿಗೇಡ್‌ ರಸ್ತೆಯಲ್ಲಿರುವ, ಬಹುರಾಷ್ಟ್ರೀಯ ಸಂಸ್ಥೆಗೆ ಸೇರಿದ ಕೆಂಟಕಿ ಫ್ರೈಡ್‌ ಚಿಕನ್ (ಕೆಎಫ್‌ಸಿ) ಮಳಿಗೆಯ ಮೇಲೆ ಕಳೆದ ವಾರ ನಡೆದ ರೈತರ ದಾಳಿ, ಹೆಬ್ಬೂರು– ಹೇಮಾವತಿ ಹಾಗೂ ಭದ್ರಾವತಿ ಘಟನೆಗಳನ್ನು ಚರ್ಚಿಸಿದ ಹಿನ್ನೆಲೆಯಲ್ಲಿ ಸಂಪುಟ ಈ ನಿರ್ಧಾರ ಕೈಗೊಂಡಿತು ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ವರ್ಷದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ– ದೇವೇಗೌಡ

ಬೆಂಗಳೂರು, ಫೆ. 5– ಮುಂದಿನ ಒಂದು ವರ್ಷದೊಳಗಾಗಿ ರಾಜ್ಯದಲ್ಲಿನ ವಿದ್ಯುತ್ ಉತ್ಪಾದನೆಯನ್ನು 1,000ದಿಂದ 1,200 ಮೆಗಾವ್ಯಾಟ್‌ನಷ್ಟು ಹೆಚ್ಚಿಸುವ ಮೂಲಕ ಸಣ್ಣ ಕೈಗಾರಿಕೆಗಳು ಮತ್ತು ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಅವರು ಇಂದು ಇಲ್ಲಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.