25 ವರ್ಷದ ಹಿಂದೆ
ಎಂಟು ಸಚಿವರ ವಜಾ ವಿಧಾನಸಭೆ ವಿಸರ್ಜನೆ
ಬೆಂಗಳೂರು, ಜುಲೈ 22– ಆಡಳಿತಾರೂಢ ಜನತಾದಳ ಇಬ್ಭಾಗವಾಗಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದ ಹಿನ್ನೆಲೆಯಲ್ಲಿ ಇಂದು ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಣದಲ್ಲಿ ಉಳಿದಿರುವ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಂಟು ಮಂದಿ ಸಚಿವರು ಸಂಪುಟದಿಂದ ವಜಾ ಆಗಿದ್ದು, ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲಾಗಿದೆ.
ರಾಜ್ಯ ವಿಧಾನಸಭೆಯನ್ನು ವಿಸರ್ಜನೆ ಮಾಡುವಂತೆ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ತುರ್ತು ಸಭೆ ಮಾಡಿದ ಶಿಫಾರಸನ್ನು ರಾಜ್ಯಪಾಲ ಖುರ್ಷಿದ್ ಆಲಂ ಖಾನ್ ಅವರು ಅಂಗೀಕರಿಸಿದ್ದಾರೆ.
ಇದಕ್ಕೆ ಮುನ್ನ ಮುಖ್ಯಮಂತ್ರಿ ಪಟೇಲ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಂಟು ಮಂದಿ ಸಚಿವರನ್ನು ಸಂಪುಟದಿಂದ ವಜಾ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.