
ಪ್ರಜಾವಾಣಿ ವಿಶೇಷ
ಸುಷ್ಮಾ ಸ್ವರಾಜ್ ದೆಹಲಿ ಹೊಸ ಮುಖ್ಯಮಂತ್ರಿ
ನವದೆಹಲಿ, ಅ. 10– ಜನಪ್ರಿಯತೆ ಮತ್ತು ವರ್ಚಸ್ಸು ಕಳೆದುಕೊಳ್ಳುತ್ತಿರುವ ಆತಂಕ
ದಲ್ಲಿದ್ದ ಬಿಜೆಪಿಯು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ, ಮುಂದಿನ ತಿಂಗಳು ನಡೆಯುವ ದೆಹಲಿ ಚುನಾವಣೆಗೆ ಹೊಸ ಆಯಾಮ ನೀಡಿದೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಜತೆಗೆ ಸಂಪರ್ಕ ಖಾತೆಯನ್ನೂ ನಿರ್ವಹಿಸುತ್ತಿರುವ ಸುಷ್ಮಾ ಸ್ವರಾಜ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಂಭವವಿದೆ. ಪದತ್ಯಾಗ ಮಾಡಬೇಕಾಗಿ ಬಂದ ಮುಖ್ಯಮಂತ್ರಿ ಸಾಹೀಬ್ ಸಿಂಗ್ ವರ್ಮಾ ತಮ್ಮ ಬದಲಾವಣೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.