13,2,2000, ಭಾನುವಾರ
‘500 ರೂಪಾಯಿ ನೋಟು ನಿಷೇಧ ಇಲ್ಲ’
ಸಾಲ್ಬೊನಿ (ಪಶ್ಚಿಮ ಬಂಗಾಳ), ಫೆ. 12 (ಪಿಟಿಐ, ಯುಎನ್‌ಐ)– 500 ರೂಪಾಯಿ ಮೌಲ್ಯದ ನೋಟುಗಳನ್ನು ನಿಷೇಧಿಸುವ ಯಾವುದೇ ಯೋಜನೆ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಸ್ಪಷ್ಟವಾಗಿ ತಿಳಿಸಿದೆ.
‘ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಮತ್ತು ಇತರ ಸಮಾಜ ವಿರೋಧಿ ಸಂಘಟನೆಗಳು ಚಲಾವಣೆಗೆ ತಂದಿವೆ ಎನ್ನಲಾದ 500 ರೂಪಾಯಿ ಮೌಲ್ಯದ ಖೋಟಾ ನೋಟುಗಳಿಂದ ರಾಷ್ಟ್ರದ ಆರ್ಥಿಕ ಪರಿಸ್ಥಿತಿಯ ಮೇಲೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಉಂಟಾಗದು’ ಎಂದು ಆರ್‌ಬಿಐ ಗವರ್ನರ್ ಬಿಮಲ್ ಜಲನ್ ಅವರು ಹೇಳಿದರು.
‘ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಲಿಮಿಟೆಡ್’ ಅನ್ನು ಅಧಿಕೃತವಾಗಿ ಉದ್ಘಾಟಿಸಿದ ನಂತರ ಅವರು ವರದಿಗಾರರ ಜತೆ ಮಾತನಾಡಿದರು.
ಕೇಂದ್ರದಿಂದ ಹೆಚ್ಚುವರಿ ವಿದ್ಯುತ್‌ಗೆ ಒಪ್ಪಂದ
ಬೆಂಗಳೂರು, ಫೆ. 12– ರಾಜ್ಯಕ್ಕೆ ಕೇಂದ್ರದ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ ಹೆಚ್ಚುವರಿಯಾಗಿ 180 ಮೆಗಾವಾಟ್ ವಿದ್ಯುತ್ ಸರಬರಾಜು ಹಾಗೂ ವಿತರಣಾ ವ್ಯವಸ್ಥೆ ಸುಧಾರಣೆಗೆ ಮುಂದಿನ ಐದಾರು ವರ್ಷಗಳಲ್ಲಿ 10 ಸಾವಿರ ಕೋಟಿ ರೂಪಾಯಿ ಸಾಲ
ಸೌಲಭ್ಯ ಒದಗಿಸುವ ಒಪ್ಪಂದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂದು ಸಹಿ ಹಾಕಿದವು.
ವಿದ್ಯುತ್ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದಂತೆ ರಾಷ್ಟ್ರದಲ್ಲೇ ಮೊದಲ ಬಾರಿಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರಗಳು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.