
ಪ್ರಜಾವಾಣಿ ವಾರ್ತೆ
ಬೆಂಗಳೂರು, ಮಾ. 2– ಸಂಪುಟ ವಿಸ್ತರಣೆ ಮತ್ತು ಖಾತೆಗಳ ಮರುಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಕೈಗೊಂಡಿರುವ ನಿರ್ಧಾರದಿಂದಾಗಿ ಆಡಳಿತ ಜನತಾ ದಳದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ದೇವೇಗೌಡರ ಬೆಂಬಲಿಗ ಸಚಿವರು ಸಂಪುಟಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ರೇಷ್ಮೆ ಖಾತೆಯಿಂದ ಉದ್ಯೋಗ ಮತ್ತು ತರಬೇತಿ ಖಾತೆಗೆ
ವರ್ಗಾವಣೆಗೊಂಡಿರುವ ರಾಜ್ಯ ಸಚಿವ ಎಂ. ವರದೇಗೌಡ ಅವರು ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.