
25 ವರ್ಷಗಳ ಹಿಂದೆ ಈ ದಿನ
‘ವಿವಿ ಕಾಯ್ದೆ ತಿದ್ದುಪಡಿ ತಂದರೆ ಅನುದಾನವಿಲ್ಲ’
ಮೈಸೂರು, ಜ. 7– ರಾಜ್ಯ ಸರ್ಕಾರವು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ವಿಶ್ವವಿದ್ಯಾಲಯಗಳ ಮೇಲೆ ಹತೋಟಿ ಸಾಧಿಸಲು ಪ್ರಯತ್ನಿಸಿದಲ್ಲಿ, ಅವುಗಳಿಗೆ ನೀಡುತ್ತಿ
ರುವ ಧನಸಹಾಯವನ್ನು ಹಿಂತೆಗೆದುಕೊಳ್ಳುವುದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಡಾ. ಹರಿಗೌತಮ್ ಇಂದು ಇಲ್ಲಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡು ತ್ತಿದ್ದ ಹರಿಗೌತಮ್ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರುವ ನಿರ್ಣಯದ ಬಗ್ಗೆ ಮರುವಿಮರ್ಶೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಅವಧಿ ಮುಗಿದ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ
ಬೆಂಗಳೂರು, ಜ. 6– ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳಿಗೆ ಜ. 28ರಂದು ನಡೆಯಬೇಕಾಗಿದ್ದ ಚುನಾವಣೆಗಳು ಹೈಕೋರ್ಟ್ ಆದೇಶದ ಪ್ರಕಾರ ಮುಂದಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವಧಿ ಮುಗಿದ ಈ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅವರು ಇಂದು ಇಲ್ಲಿ ಹೇಳಿದರು.
ಚುನಾವಣಾ ದಿನಾಂಕವನ್ನು ಆರು ವಾರಗಳೊಳಗೆ ಸರ್ಕಾರ ಪ್ರಕಟಿಸುತ್ತದೆ ಎಂದು ಚಿಮ್ಮನಕಟ್ಟಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.