ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗಕ್ಕೆ ಪಟೇಲ್ ತರಾಟೆ
ಬೆಂಗಳೂರು, ಮಾರ್ಚ್ 22– ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ವೇಳಾಪಟ್ಟಿ ಪ್ರಕಟಿಸಿರುವ ರಾಜ್ಯ ಚುನಾವಣಾ ಆಯೋಗದ ಕ್ರಮವನ್ನು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ವಿಧಾನಸಭೆಯಲ್ಲಿ ಇಂದು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.
‘ಆರು ವಾರದೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತು. ಹಳೆಯ ಕಾನೂನು ಪ್ರಕಾರ ಚುನಾವಣೆ ನಡೆಸುವುದಾಗಿ ಆಯೋಗ ತಿಳಿಸಿದೆ. ಹೊಸ ಕಾನೂನು ಜಾರಿಯಲ್ಲಿರುವುದು ಆಯೋಗದ ಗಮನಕ್ಕೆ ಬಂದಿಲ್ಲವೇ?’ ಎಂದರು.
ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಮಾನ್ಸಾಂಟೊ ಘಟಕ
ಬೆಂಗಳೂರು, ಮಾರ್ಚ್ 22– ಕರ್ನಾಟಕದಲ್ಲಿ ವಿವಾದದ ಅಲೆ ಎಬ್ಬಿಸಿರುವ ಮಾನ್ಸಾಂಟೊ ಕಂಪನಿಯ ಅತ್ಯಾಧುನಿಕ ಸಂಶೋಧನಾ ಕೇಂದ್ರವೊಂದು ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಯಾವುದೇ ಸದ್ದುಗದ್ದಲವಿಲ್ಲದೆ ಅಸ್ತಿತ್ವಕ್ಕೆ ಬಂದಿದೆ.
ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಮಾಡಲು ಇದೇ ಮೊದಲು ಅವಕಾಶ ನೀಡಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಮಾನ್ಸಾಂಟೊ ಈ ಪ್ರಯೋಗಾಲಯವನ್ನು ನಿರ್ಮಾಣ ಮಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.