ಬಂದ್: ರಾಜ್ಯದಾದ್ಯಂತ ವ್ಯಾಪಕ ಬಂದೋಬಸ್ತ್
ಬೆಂಗಳೂರು, ಸೆ. 27– ವರನಟ ಡಾ. ರಾಜ್‌ಕುಮಾರ್ ಅಪಹರಣದ ಹಿನ್ನಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಾಳೆ ನೀಡಿರುವ ಕರ್ನಾಟಕ ಬಂದ್ ಸಂದರ್ಭದಲ್ಲಿ ಯಾವುದೇ ಹಿಂಸಾಚಾರಕ್ಕೆ ಅವಕಾಶ ನೀಡದೆ ಶಾಂತಿ–ಸುವ್ಯವಸ್ಥೆ ಕಾಪಾಡಲು ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಂದ್‌ಗೆ ಕರೆ ನೀಡಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅಭಿಮಾನಿ ಸಂಘಗಳಿಗೆ, ಬಂದ್ ಸಂದರ್ಭದಲ್ಲಿ ಸಾರ್ವಜನಿಕರನ್ನು ಬಲವಂತವಾಗಿ ಪಾಲ್ಗೊಳ್ಳುವಂತೆ ಮಾಡಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.