ADVERTISEMENT

ಪ್ರಜಾವಾಣಿ 25ವರ್ಷಗಳ ಹಿಂದೆ: ಬುಧವಾರ, 17-01-1996

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 19:31 IST
Last Updated 16 ಜನವರಿ 2021, 19:31 IST
   

ಮೂವರುಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿ ಅನುಮತಿ ಕೋರಿಕೆ

ನವದೆಹಲಿ, ಜ. 16–ಬಹಳ ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಹವಾಲ ಪ್ರಕರಣದಲ್ಲಿ ಆರೋಪಿಗಳಾದ ಮೂವರು ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲು ಸಿಬಿಐ ಇಂದು ರಾಷ್ಟ್ರಪತಿ ಅವರ ಅನುಮತಿ ಕೋರುವ ಮೂಲಕ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಮಾಜಿ ಉಪಪ್ರಧಾನಿ ದೇವಿ ಲಾಲ್, ಬಿಜೆಪಿ ಅಧ್ಯಕ್ಷ ಎಲ್‌.ಕೆ. ಅಡ್ವಾಣಿ, ಮಾಜಿ ಸಚಿವ ಅರ್ಜುನ್ ಸಿಂಗ್ ಸೇರಿದಂತೆ 7 ರಾಜಕಾರಣಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಎಸ್. ವರ್ಮಾ, ಎಸ್.ಪಿ. ಬರೂಚ ಮತ್ತು ಎಸ್‌.ಸಿ. ಸೇನ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಇಂದು ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ದೀಪಂಕರ್ ಪಿ. ಗುಪ್ತ ಅವರು ಹಾಜರಾಗಿ ಹವಾಲ ಪ್ರಕರಣದ ಬಗೆಗೆ ನಡೆಸಿರುವ ತನಿಖೆಯ ವಿವರವನ್ನು ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.