ಬೆಂಗಳೂರು,ಜುಲೈ 5– ಉತ್ತರ ಕರ್ನಾಟಕದಲ್ಲಿ ಕೆಲವು ಶಕ್ತಿಗಳು ಹೊಸ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಇಂದು ಆರೋಪಿಸಿದರು.
ಹೈಕೋರ್ಟ್ ಪೀಠ ಸ್ಥಾಪನೆಯಾಗದಿರುವುದಕ್ಕೆ ಹಾಗೂ ಆ ಪ್ರದೇಶದ ಅಭಿವೃದ್ಧಿಯಲ್ಲಿ ಅಸಮತೋಲನ ಉಂಟಾಗಿರುವುದಕ್ಕೆ 8 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡುತ್ತಿರುವ ಶಕ್ತಿಗಳನ್ನು ಹಾಗೂ ಗುಂಪುಗಳನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಎಸ್ ಕೌಜಲಗಿ ಅವರಿಗೆ ಇಂದು ಕೆಪಿಸಿಸಿ ಕಚೇರಿ ಆವರಣದಲ್ಲಿ ಅಧಿಕಾರ ಹಸ್ತಾಂತರ ಮಾಡಿದ ನಂತರ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಮುಖ್ಯಮಂತ್ರಿ ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ನಾನು ಇಲ್ಲಿವರೆಗೆ ಸುಮ್ಮನಿದ್ದೆ ಆದರೆ ಈ ಶಕ್ತಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.