ADVERTISEMENT

25 ವರ್ಷಗಳ ಹಿಂದೆ | ಶಾಲಾ ದೇಣಿಗೆ: ತಜ್ಞರ ಸಮಿತಿ ರಚನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2025, 23:19 IST
Last Updated 28 ಜನವರಿ 2025, 23:19 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಬೆಂಗಳೂರು, ಜ. 28– ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸೂಚಿಸಿರುವಂತೆ ಎರಡು ವಾರದಲ್ಲಿ ತಜ್ಞರ ಸಮಿತಿ ರಚಿಸಬೇಕೆಂದು ಹೈಕೋರ್ಟ್‌ ಇಂದು ಸರ್ಕಾರಕ್ಕೆ ಆದೇಶಿಸಿತು.

ಈ ಆದೇಶದ ಪಾಲನೆ ಬಗ್ಗೆ ಕೋರ್ಟಿಗೆ ವರದಿ ಸಲ್ಲಿಸಬೇಕೆಂದು ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಿತು.

ವಕೀಲರಾದ ಕೆ.ಎನ್‌. ಸುಬ್ಬಾರೆಡ್ಡಿ ಸಾರ್ವಜನಿಕ ಹಿತಾಸಕ್ತಿಯ ರಿಟ್‌ ಅರ್ಜಿ ಸಲ್ಲಿಸಿ, ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಪ್ರವೇಶ ನೀಡುವ ವೇಳೆ ಭಾರಿ ಮೊತ್ತದ ವಂತಿಗೆ ಪಡೆಯುವುದಲ್ಲದೆ, ಹೆಚ್ಚಿನ ಮೊತ್ತದ ಶುಲ್ಕ ವಸೂಲಿ ಮಾಡುತ್ತಿದ್ದು, ಇದನ್ನು ನಿಲ್ಲಿಸಲು ಆದೇಶಿಸಬೇಕೆಂದು ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.