ADVERTISEMENT

25 ವರ್ಷಗಳ ಹಿಂದೆ | ಚೆನ್ನಮ್ಮನ ಹೆಸರಲ್ಲಿ ಅಂಚೆಚೀಟಿ, ನಾಣ್ಯಕ್ಕೆ ರಾಜ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 23:30 IST
Last Updated 1 ಅಕ್ಟೋಬರ್ 2024, 23:30 IST
25 ವರ್ಷಗಳ ಹಿಂದೆ..
25 ವರ್ಷಗಳ ಹಿಂದೆ..   

ಬೆಂಗಳೂರು, ಅ. 1– ‘ಕಿತ್ತೂರು ರಾಣಿ ಚೆನ್ನಮ್ಮನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಅಂಚೆಚೀಟಿ ಹಾಗೂ ನಾಣ್ಯವನ್ನು ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿ ರಾಜ್ಯ ಸರ್ಕಾರ ಪತ್ರ ಬರೆದಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌ ಇಂದು ಇಲ್ಲಿ ತಿಳಿಸಿದರು.

ನಗರದ ರವೀಂದ್ರ ಕಲಾಕ್ಷೇತ್ರದ ಉದ್ಯಾನದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರು ಪತ್ರ ಬರೆದಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT