ನವದೆಹಲಿ, ಸೆಪ್ಟೆಂಬರ್ 21– ಚುನಾವಣಾ ನಿರ್ವಹಣೆಗಾಗಿ ನೇಮಿಸಲಾಗುವ ಸಿಬ್ಬಂದಿ ಬಗ್ಗೆ ಚುನಾವಣಾ ಆಯೋಗಕ್ಕೆ ಪೂರ್ಣ ಅಧಿಕಾರ ನೀಡಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ, ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತು.
ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಏರ್ಪಟ್ಟ ಒಪ್ಪಂದದ ಕುರಿತು ಚುನಾವಣಾ ಆಯೋಗ ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಪಿ. ಭರೂಚಾ, ವೈ.ಕೆ. ಸಬರ್‌ವಾಲಾ ಮತ್ತು ರುಮಾ ಪಾಲ್ ಅವರನ್ನು ಒಳಗೊಂಡ ತ್ರಿಸದಸ್ಯರ ಪೀಠ ಇಂದು ಇತ್ಯರ್ಥಗೊಳಿಸಿತು.
ಗ್ರಾ.ಪಂ. ಅಧ್ಯಕ್ಷರ ಶಿರಚ್ಛೇದ
ಪಾವಗಡ, ಸೆಪ್ಟೆಂಬರ್ 21– ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರನ್ನು ಹಾಡುಹಗಲೇ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾವಗಡ ತಾಲ್ಲೂಕಿನ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ರ‍್ಯಾಪ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಾರೆಡ್ಡಿ (25) ಬೆಳಿಗ್ಗೆ ತಮ್ಮ ಊರು ಹುಸೇನ್‌ಪುರದಿಂದ ಬಸ್ಸಿನಲ್ಲಿ ಬರುತ್ತಿದ್ದಾಗ ನಾಗಲಮಡಿಕೆ ಉತ್ತರ ಪಿನಾಕಿನಿ ನದಿ ಬಳಿಯ ಬುಡಗೂರು ಎಂಬಲ್ಲಿ ಬಸ್ಸಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಅವರ ತುಂಡ ಕತ್ತರಿಸಿ ಚೀಲದಲ್ಲಿ ತೆಗೆದುಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.