
ಪ್ರಜಾವಾಣಿ ವಾರ್ತೆ
ಬೆಂಗಳೂರು, ಫೆ. 8– ಗ್ರಾಮೀಣ ಅಭ್ಯರ್ಥಿಗಳಿಗೆ ಶೇ 25ರ ಕೃಪಾಂಕ ನೀಡುವ ಕಾಯ್ದೆ ಈಗ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ನೇರ ನೇಮಕಾತಿ ಮೇಲೆ ಇದ್ದ ನಿಷೇಧವನ್ನು ರದ್ದುಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿತು.
ಈಗ ಖಾಲಿ ಇರುವ ಹುದ್ದೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದರು.
ಗಡಿ ವಿವಾದ: ಸಭೆ ಕರೆಯಲು ಪ್ರಧಾನಿಗೆ ವಿಲಾಸರಾವ್ ಪತ್ರ
ನವದೆಹಲಿ, ಫೆ. 8– ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲು ಉಭಯ ರಾಜ್ಯಗಳ ಸಭೆ ಕರೆಯಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.