ಕೆ.ಎಂ. ದೊಡ್ಡಿ ಬಳಿ ಉದ್ರಿಕ್ತ ಸ್ಥಿತಿ, ಲಾಠಿ ಪ್ರಹಾರ, ಅಶ್ತುವಾಯು
ಮಂಡ್ಯ, ನ.7– ಮದ್ದೂರು ತಾಲ್ಲೂಕು ಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ತಮ್ಮ ಮೇಲೆ ಕಲ್ಲು ತೂರಾಟ ನಡೆಸಿದ ಉದ್ರಿಕ್ತ ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರಲ್ಲದೆ ಎಂಟು ಸುತ್ತು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.
ಕಲ್ಲೆಸತದಿಂದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೆ.ಗರ್ಗ್ ಅವರು ಸೇರಿದಂತೆ ಸುಮಾರು ಹನ್ನೆರಡು ಜನ ಪೊಲೀಸರಿಗೆ ಗಾಯಗಳಾಗಿವೆ. ಲಾಠಿ ಪ್ರಹಾರದಿಂದ ನಾಲ್ಕೈದು ಜನರು ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.