ADVERTISEMENT

25 ವರ್ಷಗಳ ಹಿಂದೆ: ವೀರಪ್ಪನ್‌ ಜೀವರಕ್ಷಣೆಗೆ ಸರ್ಕಾರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 19:30 IST
Last Updated 14 ಜುಲೈ 2022, 19:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವೀರಪ್ಪನ್‌ ಜೀವರಕ್ಷಣೆಗೆ ಸರ್ಕಾರ ಒಪ್ಪಿಗೆ

ಬೆಂಗಳೂರು, ಜುಲೈ 14– ಒಂಬತ್ತು ಮಂದಿ ಅರಣ್ಯ ಸಿಬ್ಬಂದಿಯನ್ನು ಅಪಹರಿಸಿ ಅವರನ್ನು ಒತ್ತೆಯಾಳಾಗಿ ಇಟ್ಟುಕೊಂಡಿರುವ ಕುಖ್ಯಾತ ನರಹಂತಕ–ಕಾಡುಗಳ್ಳ ವೀರಪ್ಪನ್‌ ವಿಧಿಸಿರುವ ಷರತ್ತಿನಂತೆ ಆತನ ಶರಣಾಗತಿಯನ್ನು ಒಪ್ಪಿಕೊಂಡು, ಜೀವ ರಕ್ಷಣೆ ಮಾಡಲು ರಾಜ್ಯ ಸರ್ಕಾರ ಸಮ್ಮತಿಸಿದೆ.

ವೀರಪ್ಪನ್‌ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಈ ತೀರ್ಮಾನಕ್ಕೆ ತಮಿಳುನಾಡು ಸರ್ಕಾರವೂ ಒಪ್ಪಿಗೆ ಸೂಚಿಸಿದೆ ಎಂದು, ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ವಾರ್ತಾ ಸಚಿವ ಎಂ.ಸಿ.ನಾಣಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ವೀರಪ್ಪನ್‌ ಜೀವಕ್ಕೆ ರಕ್ಷಣೆ ನೀಡಲು ಸರ್ಕಾರ ಕೈಗೊಂಡಿರುವ ತೀರ್ಮಾನ ಪೊಲೀಸ್‌ ಅಧಿಕಾರಿಗಳ ವಲಯದಲ್ಲಿ ತೀವ್ರ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರದ ಈ ನಿರ್ಧಾರ ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿಲ್ಲ ಎಂಬುದು ಪೊಲೀಸ್ ಅಧಿಕಾರಿಗಳ ಸ್ಪಷ್ಟ ಅಭಿಪ್ರಾಯ.

ರಾಷ್ಟ್ರಪತಿ ಚುನಾವಣೆ ಶೇಕಡ 95 ಮತದಾನ

ನವದೆಹಲಿ, ಜುಲೈ 14 (ಪಿಟಿಐ)– ದೇಶದ 11ನೇ ರಾಷ್ಟ್ರಪತಿಯ ಆಯ್ಕೆಗಾಗಿ ಇಂದು ದೇಶದಾದ್ಯಂತ ನಡೆದ ಚುನಾವಣೆಯಲ್ಲಿ ಶೇಕಡ 95ರಷ್ಟು ಮತದಾನವಾಗಿದೆ.

ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಉಪರಾಷ್ಟ್ರಪತಿ ಕೆ.ಆರ್‌.ನಾರಾಯಣನ್‌ ಅವರಿಗೆ ಬೆಂಬಲ ಸೂಚಿಸಿರುವ ಹಿನ್ನೆಲೆ ಯಲ್ಲಿ ಅವರು ಅತ್ಯುನ್ನತ ಹುದ್ದೆಗೆ ಆಯ್ಕೆಯಾಗುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.