ADVERTISEMENT

25 ವರ್ಷಗಳ ಹಿಂದೆ: ಖ್ಯಾತ ಸಂಗೀತ ನಿರ್ದೇಶಕ ನಾಗೇಂದ್ರ ನಿಧನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 23:25 IST
Last Updated 4 ನವೆಂಬರ್ 2025, 23:25 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಬೆಂಗಳೂರು, ನ. 4– ‘ಗಂಧದ ಗುಡಿ’, ‘ಎರಡು ಕನಸು’, ‘ಹೊಂಬಿಸಿಲು’ ಸೇರಿದಂತೆ ಸುಮಾರು 200 ಚಲನಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿ ರಸಿಕರ ನಾಲಿಗೆಯ ತುದಿಯಲ್ಲಿಯೇ ಇರುವಂಥ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದ ಪ್ರಖ್ಯಾತ ಸಂಗೀತ ನಿರ್ದೇಶಕರಾದ ರಾಜನ್‌ ನಾಗೇಂದ್ರ ಜೋಡಿಯ ನಾಗೇಂದ್ರ ಇನ್ನಿಲ್ಲ.

ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಅವರು, ಇಂದು ನಿಧನರಾದರು.

ವಿಶ್ವಬ್ಯಾಂಕ್‌ನಿಂದ 10 ಸಾವಿರ ಕೋಟಿ ರೂಪಾಯಿ ಸಾಲ

ADVERTISEMENT

ತುಮಕೂರು, ನ. 4– ವಿವಿಧ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿಶ್ವಬ್ಯಾಂಕ್‌ನಿಂದ ಸುಮಾರು 10 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ 7ರಂದು ವಿಶ್ವಬ್ಯಾಂಕ್‌ನ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸಲಿದ್ದು, ಆಗ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇಂದು ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.