ನ್ಯಾಷನಲ್ ಕಾನ್ಫರೆನ್ಸ್‌ಗೆ ಬಹುಮತ
ಶ್ರೀನಗರ, ಅ. 2 (ಯುಎನ್‌ಎ, ಪಿಟಿಐ)– ಡಾ. ಫಾರೂಖ್ ಅಬ್ದುಲ್ಲಾ ಅವರ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಜಮ್ಮು– ಕಾಶ್ಮೀರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ 54 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಗಳಿಸಿದ್ದು, ಆರು ವರ್ಷಗಳ ಬಳಿಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಮತಎಣಿಕೆ ನಡೆದ 81 ಕ್ಷೇತ್ರಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 54 ಸ್ಥಾನಗಳನ್ನು ಗೆದ್ದು ಪ್ರಾಬಲ್ಯ ಮರೆದರೆ, ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಏಳು ಸ್ಥಾನಗಳನ್ನು ಗಳಿಸಿತು. ಸಿಪಿಎಂ, ಪ್ಯಾಂಥರ‍್ಸ್ ಪಾರ್ಟಿ ಹಾಗೂ ತಿವಾರಿ ಕಾಂಗ್ರೆಸ್ ತಲಾ ಒಂದು ಸ್ಥಾನ ಗಳಿಸಿದ್ದು, ಪಕ್ಷೇತರರು ಎರಡು ಸ್ಥಾನಗಳನ್ನು ಗೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.