ADVERTISEMENT

25 ವರ್ಷಗಳ ಹಿಂದೆ: ದಳ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಪ್ರಜಾವಾಣಿ ವಿಶೇಷ
Published 27 ಅಕ್ಟೋಬರ್ 2023, 23:55 IST
Last Updated 27 ಅಕ್ಟೋಬರ್ 2023, 23:55 IST
<div class="paragraphs"><p>25 ವರ್ಷಗಳ ಹಿಂದೆ</p></div>

25 ವರ್ಷಗಳ ಹಿಂದೆ

   

ದಳ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್‌ ನಿರ್ಧಾರ

ಬೆಂಗಳೂರು, ಅ. 27– ಈ ತಿಂಗಳ 29ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಜೆ.ಎಚ್‌.ಪಟೇಲ್‌ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಪಕ್ಷವು ಅವಿಶ್ವಾಸ ನಿರ್ಣಯ ಮಂಡಿಸಲಿದೆ.

ಕೆಪಿಸಿಸಿ ಅಧ್ಯಕ್ಷ ಧರ್ಮಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ADVERTISEMENT

ರಾಜ್ಯದ ಆಡಳಿತ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಮತ್ತು ಅಧಿವೇಶನದ ಅವಧಿಯಲ್ಲಿ ಕಾಂಗ್ರೆಸ್‌ ಅನುಸರಿಸಬೇಕಾದ ತಂತ್ರವನ್ನು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಎಂದು ಪಕ್ಷದ ವಕ್ತಾರ ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಪರಿಗಣಿಸಿ ಅವಿಶ್ವಾಸ ನಿರ್ಣಯ ಮಂಡಿಸುವುದು ಅನಿವಾರ್ಯ ಕ್ರಮ ಎಂದು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. 

ದೋಣಿ ಮುಳುಗಿ 40 ಮಂದಿ ಜಲ ಸಮಾಧಿ

ಗುವಾಹಟಿ, ಅ. 27 (ಪಿಟಿಐ, ಯುಎನ್‌ಐ)– ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮುಳುಗಿ ಸುಮಾರು 40 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಶಂಕಿಸಲಾದ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಸುಮಾರು 50 ಜನ ಪ್ರಯಾಣಿಸುತ್ತಿದ್ದ ಯಾಂತ್ರಿಕ ದೋಣಿಯೊಂದು ಸುಕಲೇಶ್ವರ ಘಾಟ್‌ ಸಮೀಪ ನದಿಯ ಮಧ್ಯ ಭಾಗದಲ್ಲಿದ್ದಾಗ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.