ADVERTISEMENT

25 ವರ್ಷಗಳ ಹಿಂದೆ: ಗೌಡರಿಗೆ ಪರೋಕ್ಷ ಸವಾಲು

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 23:30 IST
Last Updated 31 ಜನವರಿ 2024, 23:30 IST
   

ಗೌಡರಿಗೆ ಪರೋಕ್ಷ ಸವಾಲು

ಬೆಂಗಳೂರು, ಜ. 31– ಮಂತ್ರಿಮಂಡಲವನ್ನು ಪುನರ‍್ರಚಿಸದೆ ತಮ್ಮ ಮಾತಿನಂತೆ ವಿಸ್ತರಣೆ ಮಾತ್ರ ಮಾಡಿ, ಅದರಲ್ಲೂ ಪದಚ್ಯುತ ಅಧ್ಯಕ್ಷ ಬಿ.ಎಲ್. ಶಂಕರ್ ಅವರೊಬ್ಬರನ್ನೇ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರಿಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. 

ಹಣಕಾಸು ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಹಾಗೂ ಪಕ್ಷದ ನೂತನ ಅಧ್ಯಕ್ಷ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರದ ಮಾಜಿ ಸಚಿವ ಎಸ್.ಆರ್. ಬೊಮ್ಮಾಯಿ ಅವರು ಶಂಕರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದುದು ಜನತಾದಳ ಮತ್ತು ಅದರ ನೇತೃತ್ವದ ಸರ್ಕಾರ ಮುಂದೆ ಎತ್ತ ಸಾಗಬಹುದು ಎಂಬುದಕ್ಕೆ ದಿಕ್ಸೂಚಿಯಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.