
ಪ್ರಜಾವಾಣಿ ವಾರ್ತೆ
ಬಡ್ತಿ ಮೀಸಲಾತಿ ಪ್ರಶ್ನೆ: ಸರ್ವಪಕ್ಷ ಸಭೆಗೆ ಒಪ್ಪಿಗೆ
ಬೆಂಗಳೂರು, ಮಾ. 23– ವಿಧಾನಸಭಾಧ್ಯಕ್ಷರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆಯನ್ನು ಇನ್ನೆರಡು ದಿನಗಳಲ್ಲಿ ಕರೆದು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ವಿಧಾನಸಭೆಯಲ್ಲಿ ಭರವಸೆ ನೀಡಿದರು.
ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 69ನೇ ನಿಯಮದ ಪ್ರಕಾರ ಈ ವಿಷಯವನ್ನು ಪ್ರಸ್ತಾಪಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ಮಾಡಿಕೊಟ್ಟಿದ್ದರು. ಖರ್ಗೆ ಜತೆ ಬಿಜೆಪಿ ಕೆ.ಎಸ್. ಈಶ್ವರಪ‍್ಪ ಸೇರಿದಂತೆ ಕೆಲವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.