ವೈದ್ಯಕೀಯ ಶಿಕ್ಷಣಕ್ಕೆ ಬಡವರ ಸೇವೆಯ ಗುರಿ ಇರಲಿ– ಅಹ್ಮದ್
ನವದೆಹಲಿ, ಅ. 20– ಭಾರತ ಮತ್ತು ಇತರ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿನ ಇಂದಿನ ವೈದ್ಯಕೀಯ ಶಿಕ್ಷಣದ ಪ್ರಯೋಜನವು, ನರಳುತ್ತಿರುವ ಲಕ್ಷಾಂತರ ಜನರಿಗೆ ‘ಬಹಳ ಕಡಿಮೆ ಪ್ರಮಾಣದಲ್ಲಿ ಲಭ್ಯವಾಗುತ್ತಿದೆ’ ಎಂದು ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಇಂದು ಇಲ್ಲಿ ಹೇಳಿದರು.
ಅಂತರರಾಷ್ಟ್ರೀಯ ಶಾರೀರಿಕ ವಿಜ್ಞಾನಗಳ 26ನೇ ಸಮ್ಮೇಳನ ಉದ್ಘಾಟಿಸಿದ ಅವರು, ದೇಶದಲ್ಲಿ ತರಬೇತಿ ಪಡೆದ ವೈದ್ಯರ ಸಂಖ್ಯೆ ಹೆಚ್ಚಾಗಿದ್ದರೂ, ಹಳ್ಳಿಗಳಲ್ಲಿ ಕೆಲಸ ಮಾಡಲು ಇವರಲ್ಲಿ ಬಹುತೇಕರು ಹಿಂದೇಟು ಹಾಕುತ್ತಿರುವುದರಿಂದ, ಗ್ರಾಮೀಣ ಜನರಿಗೆ ಆರೋಗ್ಯ ಸೇವೆಯು ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.