50 ವರ್ಷಗಳ ಹಿಂದೆ
ಬೆಂಗಳೂರು, ಏ. 28– ಪ್ರತಿಷ್ಠೆಯ ಸಂಕೇಶ್ವರ ವಿಧಾನಸಭಾ ಕ್ಷೇತ್ರ ಸ್ಥಾನವನ್ನು ಸಂಸ್ಥಾ ಕಾಂಗ್ರೆಸ್ಸಿನಿಂದ ಮರಳಿ ಪಡೆಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್, ತೀವ್ರ ಪೈಪೋಟಿ ನಡೆದ ಚಾಮರಾಜಪೇಟೆ ಕ್ಷೇತ್ರದಲ್ಲಿ, ಕನ್ನಡ ಚಳವಳಿಗಾರರ ಕೈಯಲ್ಲಿ ಸೋಲನ್ನು ಅನುಭವಿಸಿತು.
ಈ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವು ಇಂದು ಪ್ರಕಟವಾದಾಗ, ಸಂಕೇಶ್ವರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಳಾಸಾಹೇಬ ಸಾರವಾಡ ಅವರು ತಮ್ಮ ಪ್ರತಿಸ್ಪರ್ಧಿ ಸಂಸ್ಥಾ ಕಾಂಗ್ರೆಸ್ಸಿನ ಬಿ.ಎ. ಪಾಟೀಲ ಅವರನ್ನು 4,790 ಅಧಿಕ ಮತಗಳಿಂದ ಸೋಲಿಸಿದರು. ಪಕ್ಷೇತರ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ.
ಕನ್ನಡ ಚಳವಳಿಗಾರರ ಅಭ್ಯರ್ಥಿಗೆ ಜಯ:
ಏಳು ಮಂದಿ ಸ್ಪರ್ಧಿಸಿದ್ದ ಚಾಮರಾಜಪೇಟೆ ಕ್ಷೇತ್ರದಲ್ಲಿ ಕನ್ನಡ ಚಳವಳಿಗಾರರ ಅಭ್ಯರ್ಥಿ ಪ್ರಭಾಕರ ರೆಡ್ಡಿ ಅವರು ಕಾಂಗ್ರೆಸ್ಸಿನ ವೈ. ರಾಮಚಂದ್ರ ಅವರಿಗಿಂತ ಎರಡು ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿ ವಿಜಯಿಯಾದರು. ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.