ADVERTISEMENT

75 ವರ್ಷಗಳ ಹಿಂದೆ: ಪರಿಶಿಷ್ಟರಿಗೆ ವಿದ್ಯಾರ್ಥಿವೇತನ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 0:33 IST
Last Updated 13 ಸೆಪ್ಟೆಂಬರ್ 2025, 0:33 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಕಲ್ಕತ್ತ: 90 ಮಂದಿ ಬಂಧನ

ಕಲ್ಕತ್ತ, ಸೆಪ್ಟೆಂಬರ್‌ 12– ಮುಂಬಯಿಯಲ್ಲಿ ನಡೆಯುತ್ತಿರುವ ಹತ್ತಿ ಗಿರಣಿ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರೆ ನೀಡಿದ್ದ ಒಂದು ದಿನದ ಬಂದ್‌ನಲ್ಲಿ ಪಾಲ್ಗೊಂಡಿದ್ದ 90 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಂದ್‌ ಕಲ್ಕತ್ತ ನಗರ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಸ್‌ಗಳ ಸಂಚಾರ ಎಂದಿನಂತಿತ್ತು. ಕಾರ್ಖಾನೆಗಳ ಚಟುವಟಿಕೆಗೆ ಯಾವುದೇ ಅಡ್ಡಿಯಾಗಲಿಲ್ಲ. ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಾಮಾನ್ಯವಾಗಿತ್ತು.

ADVERTISEMENT

ಆದರೂ, ಕಲ್ಕತ್ತಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಎರಡು ರೈಲುಗಳ ಸಂಚಾರಕ್ಕೆ ಭಾಗಶಃ ಅಡ್ಡಿಯಾಯಿತು. ಹೌರ ಭಾಗದ ಕೆಲವು ಕಾರ್ಖಾನೆಗಳ ಚಟುವಟಿಕೆಗೆ ಅಡಚಣೆಯಾದ ಬಗ್ಗೆ ವರದಿಯಾಗಿದೆ.

ಪರಿಶಿಷ್ಟರಿಗೆ ವಿದ್ಯಾರ್ಥಿವೇತನ ಹೆಚ್ಚಳ

ನವದೆಹಲಿ, ಸೆಪ್ಟೆಂಬರ್ 12– ಪರಿಶಿಷ್ಟ ಜಾತಿ ಮತ್ತು ಪಂಗಡ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹೆಚ್ಚುವರಿ ಎರಡು ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಆಯ್ಕೆ ಸಮಿತಿಯ ಶಿಫಾರಸು ಅನ್ವಯ ಈ ಹೆಚ್ಚುವರಿ ಅನುದಾನ ನೀಡಲು ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.