75 ವರ್ಷಗಳ ಹಿಂದೆ ಈ ದಿನ
ಬೆಂಗಳೂರು, ಸೆಪ್ಟೆಂಬರ್ 22– ಹಿಂದೂಸ್ತಾನ್ ಏರ್‌ಕ್ರಾಫ್ಟ್ ನೌಕರರು ನಡೆಸುತ್ತಿರುವ ಪ್ರತಿಭಟನೆಯು ಅಸಾಂವಿಧಾನಿಕವಾದುದು ಎಂದು ಕಂಪನಿಯ ಹಂಗಾಮಿ ಪ್ರಧಾನ ವ್ಯವಸ್ಥಾಪಕ ರಾಮಕೃಷ್ಣ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕರರು ನಡೆಸುತ್ತಿರುವ ಹೋರಾಟವನ್ನು ಆಡಳಿತ ಮಂಡಳಿಯು ಪರಿಶೀಲನೆ ನಡೆಸಿದೆ. ಅಸಾಂವಿಧಾನಿಕ ಚಟುವಟಿಕೆಯಲ್ಲಿ ನಿರತ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.