ನವದೆಹಲಿ, ಸೆ. 27– ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚನೆಯ ಕುರಿತು ಮೂರು ದಿನಗಳಿಂದ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ನೇತೃತ್ವದಲ್ಲಿ ನಡೆದ ಸಭೆಯು ಇಂದು ಅಂತ್ಯಗೊಂಡಿದೆ.
ಕಾರ್ಯಕಾರಿ ಸಮಿತಿ ಗುರುವಾರ ರಚಿಸಲಾಗುವುದು ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ತಾಂಡನ್ ಅವರು, ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸುವ ಅಧಿಕಾರ ನನಗೆ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಸುದ್ದಿಗಾರರಿಗೆ ಬುಧವಾರ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.