ಗಾಂಧಿನಗರ, ಸೆಪ್ಟೆಂಬರ್ 21– ಕಾಂಗ್ರೆಸ್ ನಾಯಕರಲ್ಲಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮಹಾತ್ಮ ಗಾಂಧೀಜಿ ಅವರ ಹೆಸರು ಬಳಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿರುವ ಕುರಿತು ಪ್ರಧಾನಿ ಪಂಡಿತ್ ನೆಹರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ನೆಹರೂ, ‘ಪಕ್ಷದ ನಾಯಕರು ತಮ್ಮ ಅಸಾಮರ್ಥ್ಯವನ್ನು ಮರೆಮಾಚಲು ಭಾಷಣಗಳಲ್ಲಿ ಗಾಂಧೀಜಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದರು.
‘ಪಕ್ಷದ ಚರ್ಚೆಗಳಲ್ಲಿ ಗಾಂಧೀಜಿ ಅವರ ಹೆಸರು ಪ್ರಸ್ತಾಪಿಸಬಾರದು. ಅವರ ಬೋಧನೆ ಮತ್ತು ಆದರ್ಶಗಳನ್ನು ಪಾಲಿಸಬೇಕಿದೆ’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.