
ಪ್ರಜಾವಾಣಿ ವಾರ್ತೆ
25 ವರ್ಷಗಳ ಹಿಂದೆ ಈ ದಿನ
ಗುರುವಾರ 22–2–2001
ಹಾಸನ, ಫೆ.21– ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ರೇವಣ್ಣ ಅವರ ಮೇಲೆ ಆ್ಯಸಿಡ್ ಎರಚಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಇಂದು ರಾತ್ರಿ 8 ಗಂಟೆಯಲ್ಲಿ ನಡೆಯಿತು.
ದೇವೇಗೌಡರ ಸೋದರ ಬಸವೇಗೌಡರ ಪುತ್ರ ಲೋಕೇಶ್ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಸಿದ್ದಾರೆ. ಆ್ಯಸಿಡ್ ಎರಚುವಾಗಲೇ ಆರೋಪಿ ಲೋಕೇಶ್‌ನನ್ನು ಸ್ಥಳದಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.